
ಹಳೆ ಕೆಲಸಗಾರ ಹನುಮಂತಪ್ಪನಿಂದ ಮ್ಯಾನೇಜರ್ ಹತ್ಯೆ, ಆರೋಪಿ ಬಂಧನ.
ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ; 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು
ಬೆಂಗಳೂರಿನ ಕೊತ್ತನೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಆಘಾತಗೊಂಡ ಪತ್ನಿ 17ನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಟೆಕ್ಕಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ. ಭಾನುಚಂದ್ರ ರೆಡ್ಡಿ ಮತ್ತು ಅವರ ಪತ್ನಿ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡವರು. ಮದುವೆಯ ನಂತರ ಕೊತ್ತನೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಈ ದಂಪತಿ, ಆರ್ಥಿಕವಾಗಿ ಸದೃಢರಾಗಿದ್ದರೂ ವ ವೈಯಕ್ತಿಕ ಕಾರಣಗಳಿಂದಾಗಿ ಈ ಹಂತಕ್ಕೆ ತಲುಪಿದ್ದಾರೆ ಎನ್ನಲಾಗಿದೆ.
ಭಾನುಚಂದ್ರ ರೆಡ್ಡಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ತೀವ್ರವಾಗಿ ನೊಂದಿದ್ದ ಅವರು, ಪತ್ನಿ ಸಾಜಿಯಾ ಮನೆಯಲ್ಲಿ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಮರಳಿದ ಸಾಜಿಯಾ ಅವರಿಗೆ ಪತಿಯ ಶವ ಕಂಡ ಕೂಡಲೇ ಆಘಾತವಾಗಿದೆ. ಈ ಆಘಾತವನ್ನು ತಡೆಯಲಾರದೆ ಅವರು ತಕ್ಷಣವೇ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ದಂಪತಿಗಳ ನಡುವೆ ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿದ್ದು, ಇದು ಅವರ ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅನಾರೋಗ್ಯದ ಕಿರಿಕಿರಿ ಮತ್ತು ಸಂಸಾರಿಕ ಜಗಳಗಳ ಹಿನ್ನೆಲೆಯಲ್ಲಿ ಈ ದಾರುಣ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಸದ್ಯ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

