Anekal|ಯುವತಿ ಮೇಲೆ ನಡುರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ,ಹಲ್ಲೆ
x

ಸಾಂದರ್ಭಿಕ ಚಿತ್ರ

Anekal|ಯುವತಿ ಮೇಲೆ ನಡುರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ,ಹಲ್ಲೆ

ಯುವತಿಯನ್ನು ಬಚಾವ್​ ಮಾಡಿ ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಯುವತಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರ ಸಮೀಪದ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ.

ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿ ಯುವತಿಯು ಭಾನುವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಾಗ ಈ ಘಟನೆ ನಡೆದಿದೆ. ಐದಾರು ಯುವಕರ ತಂಡ ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡಗಟ್ಟಿದೆ. ಒಬ್ಬನು ಯುವತಿಯ ಮೈ-ಕೈ ಮುಟ್ಟಿ ಎಳೆದಾಡಲು ಆರಂಭಿಸಿದಾಗ ಅದಕ್ಕೆ ಯುವತಿ ಪ್ರತಿರೋಧ ತೋರಿದ್ದಾಳೆ. ಈ ವೇಳೆ ಮತ್ತೊಬ್ಬ ಯುವಕ ಹಲ್ಲೆ ಮಾಡಿದ ಎಂದು ಯುವತಿ ಆರೋಪಿಸಿದ್ದಾರೆ.

ಯುವತಿಯ ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಯುವಕರು ಹಲ್ಲೆ ಮಾಡಿದ್ದಾರೆ. ಯುವತಿಯನ್ನು ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಮನೆ ಬಳಿ ಗಲಾಟೆ ಮಾಡಿದ್ದಾರೆ ಎಂದು ದೂರಿದ್ದಾರೆ. ಯುವತಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯುವತಿ ಹೇಳಿದ್ದೇನು?

ಸಂತ್ರಸ್ತ ಯುವತಿ ಮಾತನಾಡಿ, ನಾನು ಅಂಗಡಿಗೆ ಹೋಗುವ ಸಂದರ್ಭದಲ್ಲಿ ಯುವಕರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಎಲ್ಲರೂ ಕುಡಿದಿದ್ದರು, ಗಾಂಜಾ ಹೊಡೆದಿದ್ದರು. ಆಗ, ಅವರು ನನ್ನನ್ನು ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೊಡೆಯಲು ಮತ್ತು ಮುಟ್ಟಲು ಬಂದರು. ಈ ವೇಳೆ ಸ್ಥಳೀಯರು ನನ್ನನ್ನು ರಕ್ಷಿಸಿದರು ಎಂದು ಹೇಳಿದರು.

ಯುವಕರು ನನ್ನ ಮನೆಯ ಗೇಟ್​ ಹಾರಿ ಒಳ ನುಗ್ಗಿದರು. ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಯುವಕರು ಯಾರೆಂದು ಗೊತ್ತಿಲ್ಲ. ಈ ಸಂಬಂಧ ಬನ್ನೇರುಘಟ್ಟ ‌ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ನಾನು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಿದರು.

Read More
Next Story