ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ವಿಲ್ಸನ್​ ಗಾರ್ಡನ್​ ನಾಗನ ಮೊಬೈಲ್​ ವಶಕ್ಕೆ
x
ಪರಪ್ಪನ ಅಗ್ರಹಾರ

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ವಿಲ್ಸನ್​ ಗಾರ್ಡನ್​ ನಾಗನ ಮೊಬೈಲ್​ ವಶಕ್ಕೆ

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದು, ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ ಫೋನ್‌ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಮೊಬೈಲ್ ಜೊತೆಗೆ ಡ್ರಗ್ಸ್ ಹಾಗೂ ಹಣವನ್ನೂ ಸೀಜ್​ ಮಾಡಿದ್ದಾರೆ


Click the Play button to hear this message in audio format

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದು, ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ಫೋನ್‌ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಮೊಬೈಲ್ ಜೊತೆಗೆ ಡ್ರಗ್ಸ್ ಹಾಗೂ ಹಣವನ್ನೂ ಸೀಜ್​ ಮಾಡಿದ್ದಾರೆ.

ರೌಡಿಶೀಟರ್ ವಿಲ್ಸನ್‌ಗಾರ್ಡನ್ ನಾಗ ಜೈಲಿನಿಂದಲೇ ಧಮ್ಕಿ ಹಾಕುತ್ತಿದ್ದನು. ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದಾರೆ.

ಆಗಸ್ಟ್​​​ 24 ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು. ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದರು. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದರು.

Read More
Next Story