Electoral Bond Case | ಸಚಿವೆ ನಿರ್ಮಲಾ, ನಳಿನ್‌ ಕುಮಾರ್‌ ವಿರುದ್ಧದ ಎಫ್‌ಐಆರ್‌ ರದ್ದು
x

Electoral Bond Case | ಸಚಿವೆ ನಿರ್ಮಲಾ, ನಳಿನ್‌ ಕುಮಾರ್‌ ವಿರುದ್ಧದ ಎಫ್‌ಐಆರ್‌ ರದ್ದು

ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.


ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.

ಆದರ್ಶ್ ಅಯ್ಯರ್ ಎಂಬುವರು, ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದರೂ ಆಗಿರುವ ಮಾಜಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇತರೆ ಕೆಲವು ಬಿಜೆಪಿ ಮುಖಂಡರ ವಿರುದ್ಧ ಖಾಸಗಿ ದೂರು ನೀಡಿದ್ದರು. ಆ ದೂರಿನ ಆಧಾರದ ಮೇಲೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಸಚಿವೆ ನಿರ್ಮಲಾ, ನಳಿನ್ ಕುಮಾರ್ ಅವರುಗಳು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹಣಕಾಸು ಸಚಿವೆಯಾಗಿ ನಿರ್ಮಲಾ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸುವುದಾಗಿ ಬೆದರಿಸಿ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 8 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಮೊತ್ತವನ್ನು ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆದರ್ಶ್ ಅಯ್ಯರ್ ಆರೋಪಿಸಿದ್ದರು.

ಸಚಿವೆ ನಿರ್ಮಲಾ ಅವರೊಂದಿಗೆ ಜಾರಿ ನಿರ್ದೇಶನಾಲಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಇತರೆ ಬಿಜೆಪಿ ಮುಖಂಡರ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಸೂಚನೆಯಂತೆ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಬಿಜೆಪಿ ನಾಯಕರ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಕಾಯ್ದಿರಿಸಿತ್ತು.

ಇದೀಗ ಮಂಗಳವಾರ ಎಫ್ಐಆರ್ ರದ್ದು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ದೂರುದಾರರ ಆರೋಪವೇನು?

ನಿರ್ಮಲಾ ಸೀತಾರಾಮನ್ ಹಾಗೂ ಜಾರಿ ನಿರ್ದೇನಾಲಯದ ಅಧಿಕಾರಿಗಳು 2019 ರಿಂದ 2023 ರ ನವೆಂಬರ್ ಅವಧಿಯಲ್ಲಿ ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಇತರೆ ಆರೋಪಿಗಳ ಜತೆ ಒಳಸಂಚು ನಡೆಸಿ ಎಂಎನ್ಸಿ ಹಾಗೂ ಟಿಎನ್ಸಿ ಕಾರ್ಪೋರೇಟ್ ಕಂಪೆನಿಗಳ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನು ಹೆದರಿಸಿ ಚುನಾವಣಾ ಬಾಂಡ್ ಹೆಸರಿನಲ್ಲಿ 8,000 ಕೋಟಿ ರೂ.ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ನಿರ್ಮಲಾ ಸೀತಾರಾಮನ್ ಸೂಚನೆಯಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾರ್ಪೊರೇಟ್ ಕಂಪೆನಿಗಳ ಮೇಲೆ ದಾಳಿ ನಡೆಸಿ ಹಲವರನ್ನು ಬಂಧಿಸಿದ್ದರು. ಈ ದಾಳಿಗಳಿಗೆ ಹೆದರಿದ ಕಂಪೆನಿಗಳ ಸಿಇಒಗಳು, ವ್ಯವಸ್ಥಾಪಕ ನಿರ್ದೇಶಕರುಗಳು ನೂರಾರು ಕೋಟಿ ರೂ.ಗಳ ಚುನಾವಣಾ ಬಾಂಡ್ಗಳನ್ನು ಖರೀದಿ ಮಾಡಿದ್ದರು. ಇದರಿಂದ ಬಿಜೆಪಿ ರಾಷ್ಟ್ರ ಘಟಕ ಹಾಗೂ ರಾಜ್ಯ ಘಟಕವು ಲಾಭ ಪಡೆದಿದೆ ಎಂದು ಆರೋಪಿಸಲಾಗಿತ್ತು.

Read More
Next Story