Karnataka Lokayukta Raid| ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
x

ಕರ್ನಾಟಕ ಲೋಕಾಯುಕ್ತ

Karnataka Lokayukta Raid| ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ

ಕೋಲಾರ, ಯಾದಗಿರಿ, ದಾವಣಗೆರೆ ಮತ್ತು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.


ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಕೋಲಾರ, ಯಾದಗಿರಿ, ದಾವಣಗೆರೆ ಮತ್ತು ಬೆಂಗಳೂರಿನ ಹಲವು ಸ್ಥಳಗಳಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

ಕೋಲಾರ ತಾಲ್ಲೂಕಿನ ಭೂಮಾಪನಾ ಇಲಾಖೆಯ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಸುರಪುರ ತಾಲ್ಲೂಕಿನ ಆರೋಗ್ಯಾಧಿಕಾರಿ ರಾಜೀವ್ ವೆಂಕಟಪ್ಪ ನಾಯಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ. ರವಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀನಿವಾಸ ಮೂರ್ತಿ ಅವರ ನಿವಾಸಗಳು ಮತ್ತು ಕಚೇರಿಗಳಲ್ಲಿ ಲೋಕಾಯುಕ್ತರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More
Next Story