Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು
x
ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ | ಪಿಟಿಐ

Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು


ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದ ಸ್ಥಳಗಳಲ್ಲಿ ಎರಡನೇ ದಿನವೂ ಕಣ್ಮರೆಯಾದ ಜನರ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು, ಬದುಕುಳಿದವರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಮುಂದಾಗಿವೆ.

ಮಂಗಳವಾರ (ಜುಲೈ 30) ಮುಂಜಾವ ಭಾರೀ ಮಳೆಯ ನಡುವೆ ಕೇರಳದ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಬಳಿ ಭಾರೀ ಭೂ ಕುಸಿತದಿಂದ ಈವರೆಗೆ, 243 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.

ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದು, ಸಾವು-ನೋವು ಸಂಭವಿಸುವ ಭೀತಿ ಎದುರಾಗಿದೆ.

ಸೇನೆ, ನೌಕಾಪಡೆ ಮತ್ತು NDRF ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಬದುಕುಳಿದವರನ್ನು ಹೊರತೆಗೆಯಲು ಪ್ರಯತ್ನ ನಡೆಸಿವೆ. ಸಂತ್ರಸ್ತರಿಗೆ ನೆರವು ನೀಡಲು ಅನೇಕರು ಮುಂದಾಗಿದ್ದಾರೆ.

ಸರ್ಕಾರದ ಮೂಲಗಳ ಪ್ರಕಾರ, ವಯನಾಡ್ ಜಿಲ್ಲೆಯ ಮೆಪ್ಪಾಡಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭಾರೀ ಭೂಕುಸಿತಗಳು ಸಂಭವಿಸಿವೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾಳಾಗಿವೆ ಹಾಗಾಗಿ ಸಂಪರ್ಕವೂ ಕಡಿದುಕೊಂಡಿವೆ.

ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಮೃತರ ದೇಹಗಳನ್ನು ಗುರುತಿಸಲು ಮತ್ತು ಮರಣೋತ್ತರ ಪರೀಕ್ಷೆಗಾಗಿ ವಿವಿಧ ಆಸ್ಪತ್ರೆಗಳ ಶವಾಗಾರಗಳಿಗೆ ಕೊಂಡೊಯ್ಯಲಾಗುತ್ತಿದೆ.

ಬದುಕುಳಿದವರನ್ನು ತ್ವರಿತವಾಗಿ ಸ್ಥಳಾಂತರಿಸಲು, ಸೂಲೂರಿನಿಂದ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ

ಹೆಚ್ಚಿನ ಲೈವ್ ಅಪ್‌ಡೇಟ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: https://thefederal.com/category/live/wayanad-landslides-live-rescue-ops-continue-on-second-day-toll-143-136259?infinitescroll=1

Live Updates

  • 31 July 2024 5:15 AM GMT

    ಸಂತ್ರಸ್ತರ ಸಂಕಷ್ಟದ ಮಾತುಗಳು:

  • 31 July 2024 5:12 AM GMT

    ಕೇರಳದಲ್ಲಿ ಎರಡು ದಿನಗಳ ಶೋಕಾಚರಣೆ

  • 31 July 2024 5:12 AM GMT

    ವಯನಾಡಿಗೆ ಹೋಗುವ ದಾರಿಯಲ್ಲಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಪಘಾತ

    ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ವಯನಾಡ್‌ಗೆ ತೆರಳುವ ವೇಳೆ ಅವರ ವಾಹನವು ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕಿಡಾಗಿದೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


  • 31 July 2024 5:06 AM GMT

    ವಯನಾಡಿನ ಇಂದಿನ ದೃಶ್ಯಗಳು

  • 31 July 2024 4:58 AM GMT

    ದಿನ 2: ಆಪರೇಷನ್ ಮುಂಡಕ್ಕೈ ಪ್ರಾರಂಭವಾಗಲಿದೆ. 150 ಸದಸ್ಯರ ಪ್ರಬಲ ತಂಡವು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಮುಂಡಕ್ಕೈ ಪ್ರವೇಶಿಸಲು ಸಿದ್ಧವಾಗಿದೆ. ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳನ್ನು ಬಳಸಬಹುದು ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳುತ್ತವೆ.

  • 31 July 2024 4:56 AM GMT

    2ನೇ ದಿನದ ರಕ್ಷಣಾ ಕಾರ್ಯಕ್ಕೆ ಸಜ್ಜಾದ ಸೇನೆ

  • 31 July 2024 4:55 AM GMT

    ಸಂತ್ರಸ್ತರು ಕುಸಿದ ಕಟ್ಟಡಗಳಲ್ಲಿ ಸಿಲುಕಿರಬಹುದು: ಎನ್‌ಡಿಆರ್‌ಎಫ್

  • 31 July 2024 4:49 AM GMT

    2 ನೇ ದಿನದ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿವೆ..

Read More
Next Story