ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಚರ್ಚೆ: ಉಪಚುನಾವಣೆ ಕುರಿತು ರಣತಂತ್ರ
x

ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಚರ್ಚೆ: ಉಪಚುನಾವಣೆ ಕುರಿತು ರಣತಂತ್ರ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮಾಲೋಚನೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ. ಉಪಚುನಾವಣೆ ಘೋಷಣೆಯಾದ ಹಿನ್ನಲೆ ಉಭಯ ನಾಯಕರು ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮಾಲೋಚನೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ. ರಾಜಕಾರಣದಲ್ಲಿ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಉಭಯ ನಾಯಕರು ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಜತೆಗೆ, ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಒಳಮೀಸಲಾತಿ ಜಾರಿ ಕುರಿತು ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.

ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿವೆ. ಈ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಾಬೀತುಪಡಿಸಲು ಉಭಯ ನಾಯಕರು ನಿರ್ಧರಿಸಿದ್ದಾರೆ. ಸ್ಥಳೀಯವಾಗಿ ವರ್ಚಸ್ಸು ಹೊಂದಿರುವ ಮತ್ತು ಎಲ್ಲ ಸಮುದಾಯಗಳನ್ನು ಒಗ್ಗೂಡಿಸಬಲ್ಲ ಸಮರ್ಥ ಅಭ್ಯರ್ಥಿಗಳ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವರು ಹಾಗೂ ಶಾಸಕರಿಗೆ ಕ್ಷೇತ್ರವಾರು ಜವಾಬ್ದಾರಿ ಹಂಚಿಕೆ ಮಾಡಿ, ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ನಾಯಕರು ಸಮಾಲೋಚಿಸಿದರು ಎನ್ನಲಾಗಿದೆ.

ಇದೇ ವೇಳೆ ರಾಜ್ಯದಲ್ಲಿ ದಲಿತ ಸಮುದಾಯದ ವಿವಿಧ ವರ್ಗಗಳಿಂದ ಕೇಳಿಬರುತ್ತಿರುವ ಒಳಮೀಸಲಾತಿ ಬೇಡಿಕೆಯು ಸರ್ಕಾರದ ಮುಂದೆ ದೊಡ್ಡ ಸವಾಲಾಗಿದೆ. ಇದನ್ನು ಹೇಗೆ ಜಾರಿಗೊಳಿಸಬೇಕು ಮತ್ತು ಇದರಿಂದ ಉಂಟಾಗಬಹುದಾದ ರಾಜಕೀಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಈ ಸೂಕ್ಷ್ಮ ವಿಷಯವನ್ನು ನಿರ್ವಹಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.

Read More
Next Story