ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಬಸ್-ಟ್ರಕ್ ಡಿಕ್ಕಿ; 5 ಸಾವು, ಹಲವರಿಗೆ ಗಾಯ
ಖಾಸಗಿ ಕಂಪನಿಯ ಬಸ್ ದೆಹಲಿಯ ಕಾಶ್ಮೀರಿ ಗೇಟ್‌ನಿಂದ ಹೊರಟು ಪೂರ್ವ ಉತ್ತರ ಪ್ರದೇಶದ ಅಜಂಗಢಕ್ಕೆ ಹೋಗುತ್ತಿತ್ತು ಎಂದು ಗಾಯಗೊಂಡ ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ. ಅಪಘಾತಕ್ಕೆ ಒಳಗಾದ ಟ್ರಕ್ ಗಾಜಿನ ವಸ್ತುಗಳನ್ನು ಸಾಗಿಸುತ್ತಿತ್ತು ಸ್ಥಳೀಯರು ಹೇಳಿದ್ದಾರೆ.
ಉತ್ತರ ಪ್ರದೇಶದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು, ಹಲವರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ . ವಾಹನಗಳು ಜಿಲ್ಲೆಯ ಟಪ್ಪಲ್ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ ಡಿಕ್ಕಿ ಹೊಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಂಪನಿಯ ಬಸ್ ದೆಹಲಿಯ ಕಾಶ್ಮೀರಿ ಗೇಟ್‌ನಿಂದ ಹೊರಟು ಪೂರ್ವ ಉತ್ತರ ಪ್ರದೇಶದ ಅಜಂಗಢಕ್ಕೆ ಹೋಗುತ್ತಿತ್ತು ಎಂದು ಗಾಯಗೊಂಡ ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ. ಅಪಘಾತಕ್ಕೆ ಒಳಗಾದ ಟ್ರಕ್ ಗಾಜಿನ ವಸ್ತುಗಳನ್ನು ಸಾಗಿಸುತ್ತಿತ್ತು ಸ್ಥಳೀಯರು ಹೇಳಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತ ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಲಿಗಢ ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಮತ್ತು ಅಪಘಾತ ಸಂಭವಿಸಿದ ಯಮುನಾ ಎಕ್ಸ್ ಪ್ರೆಸ್ ವೇ ಕ್ಯಾರೇಜ್ ವೇಯಲ್ಲಿ ಸಾಮಾನ್ಯ ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.