LIVE | ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟು ಸೃಷ್ಟಿಗೆ ಆಕ್ರೋಶ; ಕೇಂದ್ರದಿಂದ ʼಸೌದೆಭಾಗ್ಯʼ ಎಂದ ಡಿಕೆಶಿ
ಉಪ ಚುನಾವಣಾ ಪ್ರಚಾರ ಕಣದಲ್ಲಿ ಈ ಎಲ್ಲಾ ಸಮಸ್ಯೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರವು ಸಾಮಾನ್ಯ ವರ್ಗದವರ ಮೇಲೆ ಗದಾ ಪ್ರಹಾರ ನಡೆಸಿದೆ. ಸಿಲಿಂಡರ್ ಸಮಸ್ಯೆ, ಬೆಲೆ ಏರಿಕೆ ಮೂಲಕ ಜನರಿಗೆ ಸೌದೆ ಭಾಗ್ಯ ನೀಡಿದೆ. ಉಪ ಚುನಾವಣಾ ಪ್ರಚಾರ ಕಣದಲ್ಲಿ ಈ ಎಲ್ಲಾ ಸಮಸ್ಯೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

