ಕೆಇಎ ನಿರ್ದೇಶಕ ಎಚ್.ಪ್ರಸನ್ನ ವರ್ಗಾವಣೆಗೆ ಕಿಡಿ, ವಿದ್ಯಾರ್ಥಿಗಳಿಂದ ಹೋರಾಟದ ಎಚ್ಚರಿಕೆ

3 April 2026 7:08 PM IST

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಸುಧಾರಣೆಗಳನ್ನು ತರುವ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೇಲೆ ವಿಶ್ವಾಸ ಮೂಡಿಸಿದ್ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರನ್ನು ಪ್ರಭಾರ ಸ್ಥಾನದಲ್ಲಿರಿಸಿ, ಕೃಷಿ ಮಾರುಕಟ್ಟೆ ಇಲಾಖೆಗೆ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಸ್ಪರ್ಧಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯ ಸರ್ಕಾರ ಪ್ರಾಮಾಣಿಕ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.