ಅಂಬರೀಶ್, ಮಾದೇಗೌಡ ಬಗ್ಗೆ ಅಶ್ಲೀಲ ಪದ : ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಸಿಡಿದೆದ್ದ ಮಂಡ್ಯ ಕಾಂಗ್ರೆಸ್ ಅಧ್ಯಕ್ಷ
ಮಂಡ್ಯ ಜಿಲ್ಲಾ ರಾಜಕಾರಣದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಭಾರೀ ಸಂಚಲನ ಮೂಡಿಸಿದೆ. ಈ ಆಡಿಯೋದಲ್ಲಿ ದಿ. ಅಂಬರೀಶ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಮಾದೇಗೌಡ ಹಾಗೂ ಸ್ವಪಕ್ಷದ ಸಚಿವರಾದ ಚಲುವರಾಯಸ್ವಾಮಿ ಅವರ ವಿರುದ್ಧ ಶಿವರಾಮೇಗೌಡ ಅವರು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿದ್ದು, ಸ್ವಪಕ್ಷದ ನಾಯಕರೇ ಶಿವರಾಮೇಗೌಡ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ. ಗಂಗಾಧರ್ ಅವರು ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಶಿವರಾಮೇಗೌಡ ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿಗೆ ಪತ್ರ ಬರೆದಿದ್ದಾರೆ.